ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ದುರಂತಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ತೆರಳಿ ಸ್ಥಳದಲ್ಲೇ ನಿರ್ಧಾರ ಕೈಗೊಂಡು ಕೋವಿಡ್ ರೋಗಿಗಳ ರಕ್ಷಣೆಗೆ ಮುಂದಾಗಲು ಸೂಚಿಸಿರುವುದಾಗಿ ತಿಳಿಸಿದರು.
ಕೊರೊನಾ ರೋಗಿಗಳ ಚಿಕಿತ್ಸೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಬಳಕೆ ಮಾಡುವ ಜೊತೆಗೆ ಕೋವಿಡ್ ಕಂಟ್ರೋಲ್ ಗೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ರೆಮಿಡಿಸಿಯರ್ ಉಸ್ತುವಾರಿಗೆ ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ಉಸ್ತುವಾರಿ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.