ಆಕ್ಸಿಜನ್ ಸಿಗದೇ ಒಂದೇ ದಿನದಲ್ಲಿ 22ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟ ದುರಂತ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದೆ.
ಆಕ್ಸಿಜನ್ ಸಿಗದೇ ಭಾನುವಾರ ರಾತ್ರಿ 16, ಬೆಳಗಿನ ಜಾವ 6ಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ. ಈ ವಿಷಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದ್ದು ಎಂದು ರೋಗಿಗಳ ಸಂಬಂಧಿಕರ ಆರೋಪ ಮಾಡುತ್ತಿದ್ದು, ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಆಕ್ಸಿಜನ್ ಕೊರತೆಯಿಂದ ನನ್ನ ಅಣ್ಣ ಮೃತ ಪಟ್ಟಿದ್ದಾರೆ. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಅಧಿಕಾರಿಗಳನ್ನ ಕೇಳಿದ್ರೆ ಆಕ್ಸಿಜನ್ ವ್ಯವಸ್ಥೆಯಾಗಿದೆ ಎಂದು ತಿಳಿಸಿದ್ದರು. ನಾನೊಬ್ಬ ಜನ ಪ್ರತಿನಿಧಿಯಾಗಿ ನನ್ನ ಅಣ್ಣನನ್ನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಬಿಜೆಪಿ ಸದಸ್ಯ ಚಂದ್ರಶೇಖರ್ ಆರೋಪ ಮಾಡಿದ್ದಾರೆ.