ಕೆನಡಾದಲ್ಲಿ ಕನ್ನಡದ ಡಿಂಡಿಮ ಮೊಳಗಿದೆ. ಹೌದು ವಿದೇಶದಲ್ಲಿಯೂ ಕನ್ನಡದ ಘಮ ಘಮ ಪಸರಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕೆನಡಾದ ಪಾರ್ಲಿಮೆಂಟ್ ನಲ್ಲಿ ಕನ್ನಡಿಗರೊಬ್ಬರು ಮಾತೃ ಭಾಷೆ ಕನ್ನಡವನ್ನು ಮಾತನಾಡೋ ಮೂಲಕ ಸಮಸ್ತ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಕೆನಡಾದ ಪಾರ್ಲಿಮೆಂಟ್ ಸಂಸದರಾಗಿರುವ ತುಮಕೂರು ಮೂಲದ ಕನ್ನಡಿಗ ಚಂದ್ರ ಆರ್ಯ ‘ನಾನು ನನ್ನ ಮಾತೃಭಾಷೆ ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದು ಹೇಳುವ ಮೂಲಕ ಸಿರಿಗನ್ನಡದ ಕಂಪನ್ನು ಹೊರಜಗತ್ತಿನಲ್ಲಿ ಪಸರಿಸಿದ್ದಾರೆ.
ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದು ಹೇಳಿದ್ರು. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಸಂಸತ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದರು. ಇದನ್ನೂ ಓದಿ :- ಕೆನಡಾದ ಸಂಸತ್ ನಲ್ಲಿ ಮಾತೃಭಾಷೆಯಲ್ಲೇ ಮಾತನಾಡಿದ ಕನ್ನಡಿಗ
ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಧನ್ಯವಾದಗಳು ಸಭಾಪತಿ ಎಂದು ಹೇಳಿದ್ರು.
ಆರ್ಯ ಮಾತು ಮುಕ್ತಾಯವಾಗುತ್ತಿದ್ದಂತೆ ಸಂಸತ್ ನಲ್ಲಿ ಚಪ್ಪಾಳೆಯ ಸದ್ದು ಮೊಳಗಿತು. ಇವರ ಭಾಷಣದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಚಂದ್ರ ಆರ್ಯರ ಕನ್ನಡಾಭಿಮಾನಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇದನ್ನೂ ಓದಿ :- 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಬಿಬಿಎಂಪಿಗೆ ಸುಪ್ರೀಂಕೋರ್ಟ್ ಸೂಚನೆ
ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.
ಅಂದ್ ಹಾಗೆ ಈ ಚಂದ್ರ ಆರ್ಯ ನೇಪಿಯನ್ ಕ್ಷೇತ್ರದಿಂದ 2ನೇ ಬಾರಿಗೆ ಸಂಸತ್ ಸದಸ್ಯರಾಗಿ ಲಿಬರಲ್ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಚಂದ್ರ ಆರ್ಯ ತುಮಕೂರಿನ ದ್ವಾರಾಳು ಗ್ರಾಮದ ಕೆ, ಗೋವಿಂದಯ್ಯ ಮತ್ತು ಜಯಮ್ಮ ದಂಪತಿಯ ಪುತ್ರ. ರಾಮನಗರದ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಇವರು ಧಾರವಾಡದಲ್ಲಿ ಎಂ ಬಿ ಎ ಶಿಕ್ಷಣ ಪೂರೈಸಿದ್ದಾರೆ.
ಇವರು ಕರ್ನಾಟಕ ರಾಜ್ಯ ಕಲ್ಲಿದ್ದಲು ನಿಗಮದ ಉಪ ಪ್ರಧಾನ ವ್ಯವಸ್ಥಪಾಕರಾಗಿದ್ದರು. ಬಳಿಕ ಗ್ರಾನೈಟ್ ಉದ್ಯಮದತ್ತ ಆಸಕ್ತಿ ಹೊಂದಿದ ಇವರು ದುಬೈಗೆ ತೆರಳಿದ್ದರು. ಅಲ್ಲಿಂದ ಕೆನಾಡಗೆ ತೆರಳಿ ಅಲ್ಲಿ ಕಲ್ಲಿದ್ದಲು ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. 2015ರಲ್ಲಿಯೂ ಇವರು ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.
ಇದನ್ನೂ ಓದಿ :- ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ – ಬಿ.ಸಿ ನಾಗೇಶ್ ಟ್ವೀಟ್