ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ಡಿಸಿಪಿ, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಮಂದಿ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚು ಕೊರೋನಾ ವೈರಸ್ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕದಲ್ಲಿ ಒಟ್ಟು 1033560ಕ್ಕೆ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 971556 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12731 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 49254 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.