ಪಂಜಾಬ್ ನ ನೂತನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚರಣ್ ಜೀತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.
ಅಮರಿಂದರ್ ಸಿಂಗ್ ನೇತೃತ್ವದ ಹಿಂದಿನ ಸರಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದ ಚರಣ್ ಜೀತ್ ಸಿಂಗ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಅತೀ ಹೆಚ್ಚು ಪ್ರಾಬಲ್ಯ ಹೊಂದಿರುವ ಸಿಖ್ ಸಮುದಾಯದ ಶಾಸಕರನ್ನು ಬಿಟ್ಟು ದಲಿತ ಶಾಸಕರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿ ಅಚ್ಚರಿ ಮೂಡಿಸಿದೆ.
ಪಂಜಾಬ್ ನಲ್ಲಿ ನಡೆದ ಮೂರು ದಿನಗಳ ರಾಜಕೀಯ ಘರ್ಷಣೆ ನಂತರ ಕಾಂಗ್ರೆಸ್ 48 ವರ್ಷದ ಚರಣ್ ಜೀತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ನವಜ್ಯೋತ್ ಸಿಂಗ್ ಸಿದು ಆಪ್ತರಾಗಿರುವ ಚರಣ್ ಜೀತ್ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.