ಬೆಂಗಳೂರು ಮತ್ತು ಮಂಗಳೂರು ಸಂಪರ್ಕ ರಸ್ತೆ ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಬೆಟ್ಟ-ಗುಡ್ಡ, ಭೂ ಕುಸಿತ ಉಂಟಾಗಿದೆ. ದುರಸ್ಥಿಗೆ ತಿಂಗಳುಗಳೇ ಬೇಕಾಗಿದೆ. ಹಾಗಾಗಿ, ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಿದೆ.
ಆದರೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ ಕೂಡಲೇ ಅವರ ಬೆಂಬಲಿಗರ ವಾಹನಗಳಿಗೆ ಅನುಮತಿ ಕೊಡಲಾಯಿತು. ಇದು ಜನ ಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.