ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಎರಡು ದಿಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು., ನಿನ್ನೆಯಷ್ಟೇ ಕೊರೊನಾ ಟೆಸ್ಟ್ʼಗೆ ಒಳಪಡಿಸಲಾಗಿದ್ದ ಸಿಎಂ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು.
ಆದರೂ ಕೊರೊನಾ ಲಕ್ಷಣಗಳಿರುವ ಕಾರಣ ಇಂದು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಧ್ಯ ಪರೀಕ್ಷಾ ವರದಿ ಬಂದಿದ್ದು, 2ನೇ ಬಾರಿಯ ಪರೀಕ್ಷೆಯಲ್ಲಿ ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಸೋಂಕು ಧೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ಬೆಳಗಾವಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ವೈದ್ಯರು ಸಿಎಂ ಉಳಿದುಕೊಂಡಿದ್ದ ಹೋಟೆಲ್ ಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಆ ಬಳಿಕವೂ ಸಿಎಂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ನಂತರ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ಇಂದು ತುರ್ತು ಸಭೆ ಕರೆದಿದ್ದರು
ಇನ್ನೂ ಸಿಎಂ ಕೊರೊನಾ ಬಂದಿದ್ದಕ್ಕೆ ಮಾಜ ಸಿಎಂ ಕುಮಾರಸ್ವಾಮಿ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಹಲವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.
-ಕುಮಾರಸ್ವಾಮಿ, ಮಾಜಿ ಸಿಎಂ
– ಸದಾನಂದಗೌಡ, ಕೇಂದ್ರ ಸಚಿವರು
ಕೊರೊನಾ ಸೋಂಕು ತಗುಲಿರುವ ಮುಖ್ಯಮಂತ್ರಿ ಅವರನ್ನು ಸದ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.