ಬೆಂಗಳೂರು : ನಾಳೆಯಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ಸಿಎಂ ತೆರಳಿದ್ದಾರೆ. ಕಳೆದ ಬಾರಿ ತುಮಕೂರು, ಉತ್ತರ ಕರ್ನಾಟಕ್ಕೆ ತೆರಳಿದ್ದ ಸಿಎಂ ಇದೀಗ ಸೋಂಕು ಹೆಚ್ಚಾಗಿರುವ ಹಾಸನ ಮತ್ತು ತವರು ಜಿಲ್ಲೆ ಶಿವಮೊಗ್ಗಕ್ಕೆ ತೆರಳಿ ಕೊರೊನಾ ನಿಯಂತ್ರಣ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಜೂನ್ 11ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ತೆರಳಲಿರುವ ಸಿಎಂ ಯಡಿಯೂರಪ್ಪ, ಬೆಳಗ್ಗೆ 11.15ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಾಸನ ಜಿಲ್ಲಾ ಕೋವಿಡ್-19 ನಿಯಂತ್ರಣ ಮತ್ತು ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಜೂನ್ 12ರ ಶನಿವಾರ ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ, ಮಧ್ಯಾಹ್ನ 3 ಗಂಟೆಗೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ. 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ನಿಯಂತ್ರಣ ಮತ್ತು ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆ ಮುಗಿಸಿ ಶಿಕಾರಿಪುರಕ್ಕೆ ವಾಪಸಾಗಲಿರುವ ಸಿಎಂ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಭಾನುವಾರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.