ಮಕ್ಕಳಿಗೆ ಮದ್ಯಪಾನ ಮಾಡಿಸಿ ಅವರ ಆಟೋಟಪಗಳನ್ನು ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗ್ರಾಮದ ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳಿಗೆ ಬಾಡೂಟದ ಜತೆಗೆ ಮದ್ಯ ಕೊಟ್ಟು ಕುಡಿಸಿ ವೀಡಿಯೋ ಚಿತ್ರೀಕರಣ ಮಾಡಲಾಗಿದೆ.
ಮದ್ಯ ಕುಡಿದ ಬಳಿಕ ಮಕ್ಕಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬಾಲಕನೊಬ್ಬ ತನಗೆ ಮತ್ತಷ್ಟು ಮದ್ಯ ಬೇಕು ಎಂದು ಕೂಗಾಡುತ್ತಾನೆ. ಈ ವೀಡಿಯೋ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಕೃತ್ಯ ಎಸಗಿದ ವಿಕೃತ ಮನಸ್ಸಿನ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.