ಪಾಂಗಾಂಗ್ ಸರೋವರಕ್ಕೆ ಚೀನಾ ಸೇತುವೆ ನಿರ್ಮಿಸುತ್ತಿರುವುದು ಅಕ್ರಮ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಹೇಳಿಕೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಚೀನಾದ ‘ಅಂಥ ಅತಿಕ್ರಮಣವನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
‘ಪಾಂಗಾಂಗ್ ಸರೋವರಕ್ಕೆ ಚೀನಾ ಈ ಮೊದಲಿನ ಸೇತುವೆ ಬಳಿ ಮತ್ತೊಂದು ಸೇತುವೆ ನಿರ್ಮಿಸುತ್ತಿರುವ ಬಗ್ಗೆ ವರದಿಗಳನ್ನು ನೋಡಿದ್ದೇವೆ. ಈ ಎರಡೂ ಸೇತುವೆಗಳು ಅಕ್ರಮ. 1960ರಿಂದಲೂ ಚೀನಾ ಅತಿಕ್ರಮಿಸಿರುವ ಪ್ರದೇಶದಲ್ಲೇ ಬರುತ್ತದೆ. ನಮ್ಮ ಭೂ ಪ್ರದೇಶದಲ್ಲಿ ಅಂಥ ಅಕ್ರಮ ನಿರ್ಮಾಣವನ್ನು ನಾವು ಒಪ್ಪುವುದಿಲ್ಲ. ನ್ಯಾಯಸಮ್ಮತವಲ್ಲದ ಚೀನಾದ ಪ್ರತಿಪಾದನೆಯನ್ನು ಒಪ್ಪಲಾಗದು. ಇದನ್ನೂ ಓದಿ :- ಛತ್ತೀಸ್ ಗಢದಲ್ಲಿ ಕೆಜಿಎಫ್ ಭಾಗ 3 ಹಗರಣ – ಬೃಹತ್ ಕಲ್ಲಿದ್ದಲು ಕಳ್ಳತನದ ವಿಡಿಯೋ ವೈರಲ್!
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ದೇಶದ ಸಾರ್ವಭೌಮತ್ವವನ್ನು, ಭೌಗೋಳಿಕ ಸಮಗ್ರತೆಯನ್ನು ಇತರ ರಾಷ್ಟ್ರಗಳು ಗೌರವಿಸಬೇಕು ಎಂಬುದನ್ನು ನಾವು ಬಯಸುತ್ತೇವೆ’ ಎಂದು ಅರಿಂದಮ್ ಬಗ್ಚಿ ಹೇಳಿದ್ದಾರೆ.
ಇದನ್ನೂ ಓದಿ :- ಶ್ರೀಲಂಕಾದಲ್ಲಿ ಪರಿಸ್ಥಿತಿ ಅಧೋಗತಿ – ಸರ್ಕಾರಿ ಕಚೇರಿ, ಶಾಲೆ ಕಾಲೇಜುಗಳು ಬಂದ್