ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ ಪರಿಸರ ಉಳಿಸಲು ನಡೆದಿದ್ದ ಅಪ್ಪಿಕೊ ಚಳುವಳಿ (ಚಿಪ್ಕೊ ಆಂದೋಲನ್) ನೇತೃತ್ವ ವಹಿಸಿದ್ದ ಸುಂದರ್ ಲಾಲ್ ಬಹುಗುಣ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇ 9ರಂದು ರಿಷಿಕೇಶ್ ನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುಂದರ್ ಲಾಲ್ ಬಹುಗುಣ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟ ಸಮಸ್ಯೆ ಎದುರಾಗಿದ್ದು, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಆಸ್ಪತ್ರೆಗೆ ದಾಖಲಾಗುವ 10 ದಿನಗಳ ಮುನ್ನವೇ ಬಹುಗುಣ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.