ಹಾವೇರಿ (Haveri) ಜಿಲ್ಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj bommai) ಪ್ರವಾಸ ಮಾಡಲಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ, ಹಾಗೂ ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆಯಲಿದೆ. ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಬಿಎಸ್ ವೈ (Yediyurappa) ಹಾಗೂ ಸಚಿವರು ಸಾಥ್ ನೀಡಲಿದ್ದಾರೆ. ಹಾಲಿ ಸಿಎಂ ಹಾಗೂ ಮಾಜಿ ಸಿಎಂ 460 ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ.
ಜಿಲ್ಲೆಯ ಹಿರೆಕೇರೂರು ತಾಲೂಕಿನ ಬಸರಿಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಜಲಸಂಪನ್ಮೂಲ ಇಲಾಖೆಯಿಂದ ಆಯೋಜಿಸಿರುವ ಹಲವು ಕಾಮಗಾರಿಗಳಿಗೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕಿನ 56 ಕೆರೆಗಳಿಗೆ ವರದಾ ನದಿಯಿಂದ ನೀರನ್ನು ತುಂಬಿಸುವ ಮತ್ತೂರು ಏತ ನೀರಾವರಿ ಯೋಜನೆ (Scheme) ಗೆ ಲೋಕಾರ್ಪಣೆ ಮಾಡಲಿದ್ದಾರೆ. ರಟ್ಟಿಹಳ್ಳಿ ತಾಲ್ಲೂಕಿನ 7 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರನ್ನು ತುಂಬಿಸುವ ಹಾಡೆ ಕೆರೆ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ “ಜನಸಂಕಲ್ಪ” ಯಾತ್ರೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನು ಓದಿ :- ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ವೈಎಸ್ ವಿ ದತ್ತಾಗೆ ಬಿಗ್ ಶಾಕ್ ನೀಡಿದ ಜೆಡಿಎಸ್