ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತ ನಾಯಕ. ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಹೈಕಮಾಂಡ್ ಕೂಡ ಸ್ಪಷ್ಟಪಡಿಸಿದೆ. ಹಾಗಾಗಿ ನಾಯಕತ್ವ ಬದಲಾವಣೆ ಚರ್ಚೆ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತಣಾಡಿದ ಅವರು, ಪ್ರತಿಯೊಬ್ಬ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಗಮನಹರಿಸಲಿ. ಅನಗತ್ಯ ಗೊಂದಲ ಸೃಷ್ಟಿಸುವ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಸೂಚನೆ ನೀಡಿದರು.
ಇನ್ನೂ ಸಚಿವ ಸಿ ಪಿ ಯೋಗೇಶ್ವರ್ ನೀಡಿದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರಿಂದಲೇ ವಿವರಣೆ ಪಡೆಯುವುದಾಗಿ ತಿಳಿಸಿದರು.