ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಿಲ್ಲ, ರಾಜ್ಯಸಭೆ ಚುನಾವಣೆ ಕುರಿತು ಫೋನ್ ನಲ್ಲಿಯೇ ಮಾತುಕತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತು ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಅಮಿತ್ ಶಾ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ತುರ್ತು ಕೆಲಸದ ಮೇಲೆ ಬೇರೆ ಕಡೆ ಹೋಗಿದ್ದರಿಂದ ಭೇಟಿ ಮಾಡಲು ಆಗಲಿಲ್ಲ. ದೂರವಾಣಿಯಲ್ಲೇ ಸುದೀರ್ಘವಾಗಿ ಮಾತಾನಾಡಿದ್ದೇವೆ. ಸಂಪುಟದ ಕುರಿತು ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ :- ಶಾಲಾ ಪಠ್ಯದಲ್ಲಿ ಬಲಪಂಥೀಯ ಚಿಂತನೆ ಅಳವಡಿಕೆ – ಸರ್ಕಾರದ ವಿರುದ್ಧ ಪ್ರಗತಿಪರ ಚಿಂತಕರು ಬಹಿರಂಗ ಪತ್ರ
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಮಾತನಾಡಿದ್ದು ಪರಿಷತ್ ಹಾಗೂ ರಾಜ್ಯಸಭೆಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯ ಕುರಿತು ಚರ್ಚೆ ನಡೆಸಿದ್ದೇವೆ. ಚರ್ಚೆ ವೇಳೆ ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. ಪರಿಸ್ಥಿತಿ ಅವಲೋಕಿಸಿ ದಾವೋಸ್ ಪ್ರವಾಸದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ : – ಚಿಕ್ಕಮಗಳೂರಿನ ದತ್ತಪೀಠದಲ್ಲಿ ವಿವಾದದ ಮೇಲೆ ವಿವಾದ…?
ಸಿಎಂ ಬೊಮ್ಮಾಯಿ ದೆಹಲಿ ಭೇಟಿ ತೀವ್ರ ಕುತೂಹಲ ಕೆರಳಿಸಿದ್ದು ಹಲವು ಅನುಮಾನಗಳಿಗೂ ಕಾರಣವಾಗಿದೆ. ಕೇಂದ್ರ ನಾಯಕರ ಕಣ್ಣುಮುಚ್ಚಾಲೆ ಆಟಕ್ಕೆ ಸಿಎಂ ಬೊಮ್ಮಾಯಿ ಅಂತೂ ಸುಸ್ತಾಗಿದ್ದಾರೆ. ಈಗ ಸಂಪುಟ ವಿಸ್ತರಣೆ ಮಾಡಿದ್ರೆ ಬಿಬಿಎಂಪಿ ಚುನಾವಣೆ, ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಮೇಲೆ ಹೊಡೆತ ಬೀಳುತ್ತೆ ಎಂಬುದು ಹೈಕಮಾಂಡ್ ನಿಲುವಾಗಿದೆ.
ಇದನ್ನೂ ಓದಿ :- ಗಣಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂಕೋರ್ಟ್ ..!