ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಡಿಕ್ಕಿ ಹೊಡೆದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಲು ಗುರುವಾರ ಬೆಳಿಗ್ಗೆ ಆಗಮಿಸಿದಾಗ ವಿಮಾನ ನಿಲ್ದಾಣದ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಹೆಬ್ಬಾರ್ ಅವರ ಕರು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಯಾವುದೇ ಅದೃಷ್ಟವಶಾತ್ ಅನಾಹುತ ಸಂಭವಿಸಿಲ್ಲ. ಘಟನೆಯಲ್ಲಿ ಎರಡೂ ವಾಹನಗಳಿಗೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.