ಕ್ರಿಕೆಟ್ ಆಡುವಾಗ ತೆಂಗಿನ ಮರ ಬಿದ್ದು ಬಾಲಕ ಮೃತಪಟ್ಟು, ಬಾಲಕಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.
ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಘಟನೆ ಸಂಭವಿಸಿದ್ದು, ಅಭಯ್ (6) ಮೃತಪಟ್ಟಿದ್ದಾನೆ.
ಕ್ರಿಕೆಟ್ ಆಡುವಾಗ ತೆಂಗಿನ ಮರ ಆಕಸ್ಮಿಕವಾಗಿ ಉರುಳಿ ಬಿದ್ದಿದ್ದು, ಬಾಲಕಿಗೆ ಗಾಯವಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.