ಬೆಂಗಳೂರು: ಕುಂಭಮೇಳದ ಮೊದಲ ಘಟ್ಟ ಮಂಗಳವಾರ ಅಂತ್ಯಗೊಂಡಿದೆ. ಇದುವರೆಗೆ 10 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಶಾಹಿ ಸ್ನಾನ ಮಾಡಿದ್ದಾರೆ. ಕುಂಭ ಮೇಳದಿಂದ ಮರಳುವವರು ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಹಾಗೂ ವರದಿ ಬರುವವರೆಗೂ ಮನೆಯಲ್ಲಿ ಕ್ವಾರಂಟೈನ್ ಆಗಿರಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದಿಂದಲೂ ಸಾವಿರಾರು ಮಂದಿ ಕುಂಭಮೇಳಕ್ಕೆ ತೆರಳಿದ್ದಾರೆ.
ಕುಂಭಮೇಳದಲ್ಲಿ ಭಾಗವಹಿಸಿದ್ದ ಹಲವಾರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್ ವರದಿ ಬರುವವರೆಗೂ ಕ್ವಾರಂಟೈನ್ನಲ್ಲಿರಬೇಕು. ಒಂದು ವೇಳೆ ಸೋಂಕು ತಗುಲಿದ್ದರೆ ಚಿಕಿತ್ಸೆ ಪಡೆಯಬೇಕೆಂದು ಸೂಚನೆ ನೀಡಲಾಗಿದೆ. ಇದುವರೆಗೆ 10 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಶಾಹಿ ಸ್ನಾನ ಮಾಡಿದ್ದಾರೆ. ಮಾ.11 ರಂದು ಶಿವರಾತ್ರಿ ಅಂಗವಾಗಿ ಮೊದಲ ಶಾಹಿ ಸ್ನಾನ ನಡೆದಿತ್ತು.