ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಮೂಲಕ ಗಣೇಶ ಭಕ್ತರಿಗೆ ಸಿಹಿಸುದ್ದಿ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ತಜ್ಱರ ಸಮಿತಿ ಸಭೆಯಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದ್ದು, ಗಣೇಶ ಹಬ್ಬದ ವೇಳೆ ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮ ಸೇರಿದಂತೆ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ನಡೆಸದಂತೆ ಷರತ್ತು ವಿಧಿಸಲಾಗಿದೆ.
ನಿಗದಿತ ಸ್ಥಳಗಳಲ್ಲಿ ಮಾತ್ರ ಗಣೇಶ ವಿಸರ್ಜನೆ ಮಾಡಬೇಕು. ಗಣೇಶೋತ್ಸವದ ಮೆರವಣಿಗೆ ಮಾಡುವಂತಿಲ್ಲ. 3 ದಿನ ಮಾತ್ರ ಹಬ್ಬವನ್ನು ಆಚರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.