ಶಿವವೊಗ್ಗ( shivamogga ) ದ ಅಮೀರ್ ಅಹಮದ್ ಸರ್ಕಲ್ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಮತ್ತೆ ಗಲಾಟೆ ನಡೆದು, ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಚಿತ್ರವನ್ನು ಇಡಲು ಗುಂಪು ಮುಂದಾಗಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸಾವರ್ಕರ್ ಫೋಟೊವನ್ನು ತೆಗೆಯಲಾಯಿತು. ಟಿಪ್ಪು ಚಿತ್ರ ಇಡಲು ಪೊಲೀಸರು ಅವಕಾಶ ನೀಡಲಿಲ್ಲ. ಇದನ್ನೂ ಓದಿ : – ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು !
ಪ್ರತಿಭಟನೆ ಮತ್ತು ಗಲಭೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಈ ನಡುವೆ ಅಶೋಕ ನಗರ ಪ್ರದೇಶದಲ್ಲಿ ಪ್ರೇಮ್ ಸಿಂಗ್ ( pream singh )ಎಂಬ ಯುವಕನಿಗೆ ಚೂರಿ ಇರಿಯಲಾಗಿದೆ. ಗಾಂಧಿ ಬಜಾರ್ನಲ್ಲಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಹೊರಟಾಗ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಕೆಲವು ಯುವಕರು ಚಾಕು ಇರಿದು ಓಡಿದ್ದಾರೆ. ಪ್ರೇಮ್ ಸಿಂಗ್ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಮೆಗ್ಗಾನ್ಗೆ ದಾಖಲಿಸಲಾಗಿದೆ.
ಇದನ್ನೂ ಓದಿ : – RSS ಗೆ ತ್ರಿವರ್ಣ ಧ್ವಜದ ಮೇಲೆ ಗೌರವವಿದೆ – ಆರಗ ಜ್ಞಾನೇಂದ್ರ