ಸೇನಾ ನೇಮಕಾತಿಯ ಅಗ್ನಿಪಥ್ ( AGNIPATH )ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಹೋರಾಟ ತೀವ್ರಗೊಳಿಸಲು ಕಾಂಗ್ರೆಸ್ (CONGRESS) ಹೈ ಕಮಾಂಡ್ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೊಸ ದಿಲ್ಲಿಗೆ ತೆರಳಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (SIDDARAMAIAH) ಕೂಡಾ ದೆಹಲಿ ಪ್ರವಾಸ ಮಾಡಲಿದ್ದಾರೆ.
ಬುಧವಾರ ಹೊಸ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, (D.K SHIVKUMAR ) ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (SIDDARAMAIAH) ಸೇರಿದಂತೆ ರಾಜ್ಯದ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ಶಿವಸೇನೆ ಶಾಸಕರೊಂದಿಗೆ ಏಕನಾಥ್ ಶಿಂಧೆ ನಾಪತ್ತೆ, ತುರ್ತು ಸಭೆ ಕರೆದ ಉದ್ಧವ್ ಠಾಕ್ರೆ
ಅಗ್ನಿ ಪಥ್ ವಿರುದ್ಧ ದೇಶಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಮಂಗಳವಾರ ಅಥವಾ ಬುಧವಾರ ಸಭೆ ನಡೆಯಲಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (RAHUL GANDHI) ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪಕ್ಷದ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ : – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ