ಮೈಸೂರು: ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡುವಂತೆ ಆಗ್ರಹಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ಮೈಸೂರು ನಗರ ಕಾಂಗ್ರೆಸ್ ವತಿಯಿಂದ ಪತ್ರ ಚಳುವಳಿ ನಡೆಸಲಾಯಿತು.
ಕೆ.ಆರ್.ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಶಾಂತಲಾ ಚಿತ್ರಮಂದಿರದ ಬಳಿಯಿರುವ ಅಂಚೆ ಕಚೇರಿ ಮುಂಭಾಗದಲ್ಲಿ
ಪತ್ರ ಚಳುವಳಿ ನಡೆಸಲಾಯಿತು. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಬೆಡ್ ಹಾಗೂ ಆಕ್ಸಿಜನ್ ಕೊರತೆ ನೀಗಿಸುವಲ್ಲಿ ಸರ್ಕಾರ ವಿಫಲವಾಗಿದೆ.
ಇದರ ಜೊತೆಗೆ ಅನ್ನಭಾಗ್ಯ ಅಕ್ಕಿಯನ್ನು ಕಡಿಮೆ ಪ್ರಮಾಣದಲ್ಲಿ ನೀಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿಗೆ ಏರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಯಿತು.