ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲಿದೆ.
ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ಕೊಟ್ಟಿದೆ. ಕೊರೋನಾ ಹಿನ್ನೆಲೆಯಲ್ಲಿ ಪಕ್ಷವು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ತಿಳಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಸಲಾಗುತ್ತಿದೆ. ಮೇ ತಿಂಗಳಲ್ಲಿ 16 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿತ್ತು. ಈ ತಿಂಗಳು ಕೂಡ ಕೇಂದ್ರ ಸರ್ಕಾರ ಅದೇ ಹಾದಿಯನ್ನು ಹಿಡಿದಿದೆ.
ಕೇಂದ್ರ ಸರಕಾರ ನಿರಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ.