ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದೆ. ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಡಿ. ಕೆ. ಸುರೇಶ್ ಹಾಗೂ ಪೊಲೀಸರೊಂದಿಗೆ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ. ಪೊಲೀಸರೊಬ್ಬರು ಹಿಂಬದಿಯಿಂದ ತಳ್ಳಿದ್ದಾರೆ. ಬಳಿಕ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ , ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ. ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ. ಆ ಬದ್ಧತೆ ನಮಗಿದೆ ಎಂದು ಟ್ವೀಟ್ ನಲ್ಲಿ ಹೇಳಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ : – Agnipath Schemeಗೆ ಅನುಮೋದನೆ- ಸಂಪುಟ ಸಮಿತಿ ಐತಿಹಾಸಿಕ ನಿರ್ಧಾರ