ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ನಿಧರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಆಸ್ಕರ್ ಫೆರ್ನಾಂಡೀಸ್, 1980ರಲ್ಲಿ ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ್ದು, 5 ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಯುಪಿಎ ಸರಕಾರದಲ್ಲಿ ಆಸ್ಕರ್ ಫೆರ್ನಾಂಡೀಸ್ ಸಾರಿಗೆ, ಪರಿಸರ, ರಾಷ್ಟ್ರೀಯ ಹೆದ್ದಾರಿ, ಕಾರ್ಮಿಕ ಖಾತೆ ಸೇರಿದಂತೆ ಹಲವು ಖಾತೆಗಳನ್ನು ನಿಭಾಯಿಸಿದ್ದರು.