ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬೀದಿಗಿಳಿಯಲು ಕಾಂಗ್ರೆಸ್ ಸಜ್ಜಾಗಿದೆ. ಜೂನ್ 11 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ ನಡೆಸಲು ಮುಂದಾಗಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆಯಾಗಿದೆ. ಆಗಿದೆ. ಕೊರೋನಾ ಆರ್ಥಿಕ ಸಂಕಷ್ಟದ ಮಧ್ಯೆ ಇಂಧನ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ.
ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದೆ.