ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಪ್ರಿಯಾಂಕ ವಾದ್ರಾ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಲ್ಲಿ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಆದರೆ ಎಲ್ಲಾ 403 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕಿಳಿಯಲಿದೆ. ಪಕ್ಷದ ಅಭ್ಯರ್ಥಿಗಳು ಸ್ಥಳೀಯ ಅಥವಾ ಕ್ಷೇತ್ರದ ಸಮಸ್ಯೆಗಳನ್ನು ಆಧರಿಸಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ವಿವರಿಸಿದರು.