ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ ಎದ್ದು ಕುಳಿತಿದೆ. ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಗಳು ನಡೆದಿವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರ ಸಾಧನೆಯಿಂದ ಮೈಮರೆಯಬೇಡಿ. ಮೋದಿ ಹೆಸರಿನಲ್ಲಿ ಲೋಕಸಭೆ ಗೆಲ್ಲಬಹುದು. ಆದರೆ ರಾಜ್ಯದಲ್ಲಿನ ನಮ್ಮ ಸಾಧನೆ ನೋಡಿ ವಿಧಾನಸಭೆಯಲ್ಲಿ ಗೆಲ್ಲಬೇಕಿದೆ. ಈ ಬಾರಿ 140 ಸ್ಥಾನ ಗೆಲ್ಲಬೇಕಿದೆ ಎಂದರು.
ಕಾಂಗ್ರೆಸ್ ಬಿಜೆಪಿ ನಾಯಕರಿಗೆ ಗಾಳ ಹಾಕಿದೆ. ಡಿಕೆ ಶಿವಕುಮಾರ್ ಅವರ ಪ್ರಯತ್ನ ವ್ಯರ್ಥ ಆಗಲಿದೆ. ಏಕೆಂದರೆ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ ಎಂದು ಅವರು ಹೇಳಿದರು.