ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ ( vijaya mallya ) 4 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ (suprem court ) ತೀರ್ಪು ನೀಡಿದೆ. ಮದ್ಯದ ದೊರೆ ವಿಜಯ್ ಮಲ್ಯ ನ್ಯಾಯಾಂಗ ನಿಂದನೆ ಆರೋಪದಡಿ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಶಿಕ್ಷೆ ಅತ್ಯಗತ್ಯ. ಮಲ್ಯ ಯಾವುದೇ ಪಶ್ಚಾತ್ತಾಪ ತೋರಿಸಲಿಲ್ಲ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಲಯ ಪೀಠ ಹೇಳಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್ ಗಳನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕಳೆದ ಮಾರ್ಚ್ 10 ರಂದು ಮದ್ಯದ ದೊರೆ ವಿರುದ್ಧದ ವಿಚಾರಣೆಯು ‘ಡೆಡ್ ವಾಲ್’ ನ್ನು ತಲುಪಿದೆ ಎಂದು ಪ್ರಕರಣದಲ್ಲಿ ತನ್ನ ಆದೇಶ ಕಾಯ್ದಿರಿಸಿತ್ತು. ಇದನ್ನೂ ಓದಿ : – ಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು
ವಿವಿಧ ಅಂಶಗಳ ಕುರಿತು ಹಿರಿಯ ವಕೀಲ ಮತ್ತು ಅಮಿಕಸ್ ಕ್ಯೂರಿ ಜೈದೀಪ್ ಗುಪ್ತಾ ಅವರ ವಾದಗಳನ್ನು ಆಲಿಸಿದ ನಂತರ, ಮಾರ್ಚ್ 15 ರೊಳಗೆ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಲು ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರ್ಧರಿಸಿತು. ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಲು ಮಲ್ಯ ಅವರಿಗೆ ಹಲವು ಅವಕಾಶಗಳನ್ನು ನೀಡಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ವರ್ಷ ನವೆಂಬರ್ 30 ರಂದು ನಿರ್ದಿಷ್ಟ ನಿರ್ದೇಶನಗಳನ್ನು ನೀಡಿತ್ತು.
9 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಮಲ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( state bank of india ) ನೇತೃತ್ವದ ಬ್ಯಾಂಕ್ ಗಳ ಒಕ್ಕೂಟವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಮಲ್ಯ ಆಸ್ತಿಯನ್ನು ಬಹಿರಂಗಪಡಿಸುತ್ತಿಲ್ಲ ಮತ್ತು ನಿರ್ಬಂಧದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : – ಗುಂಡೂರಾವ್ ಸರ್ಕಾರವನ್ನೇ ಬಿಟ್ಟಿಲ್ಲ – ಈ ಸರ್ಕಾರವನ್ನೂ ಬಿಡೋದಿಲ್ಲ- ಅನ್ನದಾತರ ಆಕ್ರೋಶ