ದಕ್ಷಿಣ ಕನ್ನಡದಲ್ಲಿ ಗುರುವಾರ ಸಹ ಧಾರಾಕಾರ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 9 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಅಲ್ಲದೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಬೀಸಲಿದ್ದು, ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನು ಓದಿ :- ಕರಾವಳಿ, ಕೊಡಗು,ಭಾಗಗಳಲ್ಲಿ ಮಳೆ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ
ಜಿಲ್ಲೆಯಲ್ಲಿ ಮೂಡಬಿದರೆಯಲ್ಲಿ ಅತಿಹೆಚ್ಚು ಮಳೆ ನಂತರ ಬೆಳ್ತಂಗಡಿ ತಾಲ್ಲೂಕಿನಲ್ಲಿ ಸಾಕಷ್ಟು ಮಳೆಯಾಗಿದೆ. ನೇತ್ರಾವತಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ದಾಟಿದೆ. ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಈ ಮೂರು ಜಿಲ್ಲೆಗಳಲ್ಲಿ 204 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಓದಿ :- ವೀರೇಂದ್ರ ಹೆಗ್ಗಡೆ ಸೇರಿ ನಾಲ್ವರು ರಾಜ್ಯಸಭೆಗೆ ಆಯ್ಕೆ- ಮೋದಿ ಅಭಿನಂದನೆ