ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನನ್ನ ಸಾವಿಗೆ ಈಶ್ವರಪ್ಪ ಕಾರಣರಾಗಿದ್ದಾರೆ. ನನ್ನ ಮಗು ಹಾಗೂ ಪತ್ನಿಗೆ ಸರ್ಕಾರ ನೆರವಾಗಬೇಕು ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾನೆ. ಉಡುಪಿಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪವಿರೋ ಶಾಂಭವಿ ಹೋಟೆಲ್ಸ್ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ನ ರೂಮ್ ನಂಬರ್ 207 ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ಓದಿ – ಮುಸಲ್ಮಾನರನ್ನು ತೃಪ್ತಿ ಪಡಿಸುವ ಯತ್ನ ಒಳ್ಳೆಯದಲ್ಲ – ಕೆ.ಎಸ್ ಈಶ್ವರಪ್ಪ
ಇಬ್ಬರೂ ಸಂತೋಷನ ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ (40% Commission) ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದರು. ಈ ಆರೋಪ ಮಾಡಿದ ಬಳಿಕ ಸಂತೋಷ್ ತನ್ನ ಊರು ತೊರೆದಿದ್ದರು.