ರಾಜ್ಯದಲ್ಲಿ ಕೊರೊನಾ ವೈರಸ್ ಮೂರನೇ ಅಲೆ ಭೀತಿ ಶುರುವಾಗಿದ್ದು, 242 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದು ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.
ಮೂರನೇ ಅಲೆಯಲ್ಲಿ ಮಕ್ಕಳನ್ನು ಹೆಚ್ಚಾಗಿ ಬಾಧಿಸಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಕಳೆದ 5 ದಿನಗಳಲ್ಲಿ ಬೆಂಗಳೂರಿನ ಪಾಲಿಕೆ ವ್ಯಾಪ್ತಿಯೊಂದರಲ್ಲೇ 242 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಆಗಸ್ಟ್ 6 ರಿಂದ 10ರ 5 ದಿನಗಳ ಅವಧಿಯಲ್ಲಿ 242 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 123 ಹೆಣ್ಣು ಮಕ್ಕಳು ಹಾಗೂ 119 ಗಂಡು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.
ಮಕ್ಕಳಲ್ಲಿ ಅದರಲ್ಲೂ ನವಜಾತ ಶಿಶುಗಳಲ್ಲಿ ಅಂದರೆ 9 ವರ್ಷದೊಳಗಿನ 106 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10ರಿಂದ 19 ವರ್ಷದೊಳಗಿನ 136 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ.