ಬಾಗಲಕೋಟೆ : ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾದಿಂದ ಮುಕ್ತರಾಗುವಂತೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ರಸ್ತೆಗಿಳಿದು ಜನರಿಗೆ ಕೊರೊನಾ ಜಾಗೃತಿ ಮೂಡಿಸಿದ್ದಾರೆ.
ಈಗಾಗಲೆ ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಿದ್ದು ಸವದಿ ಖುದ್ದು ತೇರದಾಳ ವಿಧಾನಸಭಾ ಕ್ಷೇತ್ರಾದ್ಯಂತ ಮೈಕ್ ಹಿಡಿದು ಕಾರ್ ಮೇಲೆ ಏರಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಿಂದ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ಯಾರೂ ಕೂಡ ನಿರ್ಲಕ್ಷ್ಯ ವಹಿಸುವದು ಬೇಡವೆಂದು ಜನರಲ್ಲಿ ಮನವಿ ಮಾಡಿದರು.
ನೇಕಾರಿಕೆ ಹಾಗು ಕೃಷಿ ಚಟುವಟಿಕೆಗೆ ಅವಕಾಶವಿದ್ದು ಎಲ್ಲರೂ ಕಾಯಕದಲ್ಲಿ ತೊಡಗಬಹುದೆಂದು ತಿಳಿಸಿದ್ದರು