ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಂತೂ ಕೊರೊನಾದ ಹಾಟ್ಸ್ಪಾಟ್ ಆಗಿ ಬದಲಾಗಿಬಿಟ್ಟಿದೆ. ಅದೆಷ್ಟೋ ಜನರು ಆಕ್ಸಿಜನ್, ಆಸ್ಪತ್ರೆಯ ಬೆಡ್, ಆ್ಯಂಬುಲೆನ್ಸ್ ಸಿಗದೆ ನರಳಾಡುತ್ತಿದ್ದಾರೆ. ಇದನ್ನು ಮನಗಂಡಿರುವ ಯುವ ಕಾಂಗ್ರೆಸ್ ಘಟಕ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ.
ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಆ್ಯಂಬುಲೆನ್ಸ್ ಸೇವೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.
ಈ ಕುರಿತಾಗಿ ಹಾಗೂ ಸಹಾಯವಾಣಿ ಮತ್ತಿತರ ನೆರವುಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ವಿಡಿಯೋ ಕಾಲ್ ಮೂಲಕ ವಿವರಿಸಿದ್ದಾರೆ.