CHINA ಸೇರಿ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಉಲ್ಭಣ – ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

CHINA ಸೇರಿ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ.

CHINA ಸೇರಿ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ (Corona virus) ಉಲ್ಬಣಗೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣ (Airport) ಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ. ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಉಲ್ಭಣಗೊಂಡಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್ ಸಂಬಂಧಿತ ಪರಿಸ್ಥಿತಿಯನ್ನು ಪರಾಮರ್ಶಿಸಲು ಮತ್ತು ಅದಕ್ಕೆ ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚಿಸಲು ಇಂದು ಮಧ್ಯಾಹ್ನ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಚೀನಾದಲ್ಲಿ ಕೋವಿಡ್ (Covid) ಉಲ್ಬಣಕ್ಕೆ ಕಾರಣವಾಗುವ ಓಮಿಕ್ರಾನ್ (Omnicorn) ಉಪ ರೂಪಾಂತರಿ ವೈರಸ್ ನ ಕನಿಷ್ಠ ಮೂರು ಪ್ರಕರಣಗಳು ಭಾರತದಲ್ಲಿ ವರದಿಯಾಗಿರುವುದರಿಂದ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನಿನ್ನೆ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಿ ಅದನ್ನು ಎದುರಿಸಲು ಕ್ರಮಗಳ ಸರಣಿಯನ್ನು ಘೋಷಿಸಿದರು. BF.7 ರೂಪಾಂತರಿ ಕೊರೋನಾ ಭಾರತದಲ್ಲಿ ಮೊದಲ ಪ್ರಕರಣ ಅಕ್ಟೋಬರ್ ನಲ್ಲಿ ಗುಜರಾತ್ ನಲ್ಲಿ ಪತ್ತೆಯಾಗಿದ್ದರೆ, ಎರಡನೆಯದು ಒಂದು ತಿಂಗಳ ನಂತರ ಅದೇ ರಾಜ್ಯದಿಂದ ಪತ್ತೆಯಾಗಿದೆ. ಮೂರನೇ ಪ್ರಕರಣ ಒಡಿಶಾದಿಂದ ಬಂದಿದೆ. ಇದನ್ನು ಓದಿ : – ಇಂದು ಸಿಎಂ ಬೊಮ್ಮಾಯಿ‌ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

Karnataka issues fresh guidelines as Maharashtra reports new Covid sub-variants | Bengaluru - Hindustan Times

ಚೀನಾದ ಹೊರತಾಗಿ, BF.7 ಈಗಾಗಲೇ ಅಮೆರಿಕ, ಇಂಗ್ಲೆಂಡ್ ಮತ್ತು ಯುರೋಪಿಯನ್ ಯೂನಿಯನ್, ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಮತ್ತು ಡೆನ್ಮಾರ್ಕ್ ನಂತಹ ದೇಶಗಳನ್ನು ತಲುಪಿದೆ. ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಅನುಕೂಲವಾಗುವಂತೆ INSACOG ಲ್ಯಾಬ್ ಗಳಿಗೆ ಎಲ್ಲಾ ಕೋವಿಡ್ -19 ಪ್ರಕರಣಗಳ ಮಾದರಿಗಳನ್ನು ಪ್ರತಿದಿನ ಕಳುಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದಾರೆ.

ಇದನ್ನು ಓದಿ : –  ಬೆಳಗಾವಿಯಲ್ಲಿಂದು ವಿರಾಟ ಪಂಚಶಕ್ತಿ ಸಮಾವೇಶ  

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!