ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಮಿತಿ ಮೀರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ನರಕ ಪರಿಸ್ಥಿತಿ ಇದೆ ಎಂದರು. ರಾಜ್ಯಪಾಲರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದ್ದು, ಅವರು ಕೂಡ ಕೆಲವು ಸಲಹೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಾಳೆ ನಡೆಯುವ ಸಭೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.