ಮೈಸೂರು : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರೋಹಿಣಿ ಸಿಂಧೂರಿ ಅವರಿಗೆ ಕೊರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ.
ರೋಹಿಣಿ ಸಿಂಧೂರಿ ಹೊರತು ಪಡಿಸಿ, ಅವರ ಪತಿ, ತಂದೆ-ತಾಯಿ ಹಾಗೂ ಅತ್ತೆ-ಮಾವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವ ಕಾರ್ಯದಲ್ಲಿ ತೊಡಿದ್ದರು.