ಬೆಂಗಳೂರು : ದಿನದಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ರಾಜ್ಯದಲ್ಲಿ ಇಂದು ದಾಖಲೆಯ 10,250 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1065290 ಕ್ಕೆ ಏರಿಕೆಯಾಗಿದೆ
440 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 69,225 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 40 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,889 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನೂ ಇಂದು 2638 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 98,3157 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಸ್ಪೋಟವಾಗಿದ್ದು, 7584 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಒಂದೇ ದಿನ 27 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಬರೋಬ್ಬರಿ 51,236 ಸಕ್ರಿಯ ಪ್ರಕರಣಗಳಿವೆ.