ಬೆಂಗಳೂರು: ಕೊರೊನಾ ಆರ್ಭಟ ರಾಜ್ಯದಲ್ಲಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 11,265 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,94,912ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 13046ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ ಒಂದೇ ದಿನ 4364 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 9,96,367ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 85,480ಕ್ಕೆ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ 8155 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ. 2540 ಮಂದಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 63,167ಕ್ಕೆ ತಲುಪಿದೆ.