ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 23,558 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಕೊರೊನಾ ಸೋಂಕಿಗೆ 116 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 13762 ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 6,412 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 10,32,233 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟು 1,76,188 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ಕೊರೊನಾ ಹೆಮ್ಮಾರಿ ಬೆಂಗಳೂರನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಇಂದು 13,640 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.