ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟ : ದಾಖಲೆಯ 25,795 ಕೇಸ್ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 25,795 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 123 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯಾಧ್ಯಂತ 25,795 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ.

ಇಂದು 5,624 ಸೋಂಕಿತರು ಸೇರಿದಂತೆ ಇದುವರೆಗೆ 10,37,857 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 1,96,236 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 15,244 ಜನರಿಗೆ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 68 ಸೋಂಕಿತರು ಸಾವನ್ನಪ್ಪಿದ್ದಾರೆ. 1,37,813 ಸಕ್ರಿಯ ಪ್ರಕರಣಗಳು ಇವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!