ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಮಂದಿಗೆ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ, 1761 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾ ಸೋಂಕು ಪೀಡಿತರಾದವರ ಸಂಖ್ಯೆ 1,53,21,089ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖವಾಗಿದೆ
ಈ ಪೈಕಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 1,54,761 ಜನ ಮಾತ್ರ. ಇದಲ್ಲದೆ ಒಂದೇ ದಿನ 1,761 ಜನರು ಕೊರೊನಾ ಸೋಂಕಿಗೆ ಬಲಿ ಆಗಿದ್ದು, ಈವರೆಗೆ ಮಹಾಮಾರಿ ಕೊರೊನಾಗೆ ಬಲಿ ಆದವರ ಸಂಖ್ಯೆ 1,80,530ಕ್ಕೆ ಏರಿಕೆ ಆಗಿದೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 12,71,29,113 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.
ಈ ನಡುವೆ ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ.