ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಆರ್ಭಟವಾಗಿದ್ದು, ದಾಖಲೆಯ 26,962 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 190 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 16,662 ಜನರು ಸೇರಿದಂತೆ ರಾಜ್ಯಾಧ್ಯಂತ 26,962 ಜನರಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇಂದು 8697 ಸೋಂಕಿತರು ಸೇರಿದಂತೆ ಇದುವರೆಗೆ 10,46,554 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 2,14,311 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 124 ಜನ ಸೋಂಕಿತರು ಸೇರಿದಂತೆ ರಾಜ್ಯಾಧ್ಯಂತ 190 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 14,075ಕ್ಕೆ ಏರಿಕೆಯಾಗಿದೆ.