ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 29,744 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 10,663 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,73,257ಕ್ಕೆ ಏರಿಕೆಯಾಗಿದೆ. ಇನ್ನು 2,81,042 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1,815 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 16,545 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,70,201ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 105 ಮಂದಿ ಬಲಿಯಾಗಿದ್ದಾರೆ.