ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತ 3,49,691 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751.
ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖಗೊಂಡಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,92,311. ಇದುವರೆಗೂ 14,09,16,417 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.
ದೇಶದಲ್ಲಿ ಹಲವು ರಾಜ್ಯಗಳಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಐದು ರಾಜ್ಯಗಳಲ್ಲಿ ಶೇ. 53ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ, ಮಹಾರಾಷ್ಟ್ರ ಮಾತ್ರ ಶೇ. 19.21 ಹೊಸ ಪ್ರಕರಣಗಳಿಗೆ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,767 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ (676) ಗರಿಷ್ಠ ಸಾವುನೋವುಗಳು ವರದಿಯಾಗಿವೆ, ನಂತರ ದೆಹಲಿಯಲ್ಲಿ 357 ದೈನಂದಿನ ಸಾವುಗಳು ಸಂಭವಿಸಿವೆ..