ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆಯ ರೂಪಾಂತರಿ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಮಂದಿಗೆ ಹೊಸದಾಗಿ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 19,164,969 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಲ್ಲಿ 3,523 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,11,853 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,97,698 ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 32 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ.