ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 40,990 ಕೊರೋನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇವತ್ತು ಒಂದೇ ದಿನ 271 ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 15,64,132 ಕ್ಕೆ ಏರಿಕೆಯಾಗಿದ್ದು, ಇವತ್ತು ಒಂದೇ ದಿನ 18,341, ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 11,43,250 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಬರೋಬ್ಬರಿ 4,05,068 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ 15,794 ಸೋಂಕಿತರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 19,353 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 162 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,70,993 ಕ್ಕೆ ಏರಿಕೆಯಾಗಿದೆ.