ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ದಾಖಲೆಯ 47930 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 490 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 47,930 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 19,34,378 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 490 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 18,776 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 5,64,485 ಕ್ಕೆ ಏರಿಕೆಯಾಗಿದೆ. ಇಂದು 31,796 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 13,51,097 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜಧಾನಿಯಲ್ಲಿ ಇವತ್ತು 281 ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಬರೋಬ್ಬರಿ 3,50,370 ಸಕ್ರಿಯ ಪ್ರಕರಣಗಳಿವೆ.