ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಪೋಟವಾಗಿದೆ. ಇಂದು 48,296 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇವತ್ತು ಒಂದೇ ದಿನ 217 ಜನಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1523142ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,23,142 ಕ್ಕೆ ಏರಿಕೆಯಾಗಿದೆ. ಇವತ್ತು 14,884 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 11,24,909 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,82,690 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,523 ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲೇ ಇವತ್ತು 26,756 ಜನರಿಗೆ ಸೋಂಕು ತಗುಲಿದೆ. 93 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,59,058 ಕ್ಕೆ ಏರಿಕೆಯಾಗಿದೆ.