ರಾಜ್ಯದಲ್ಲಿ ಇಂದು ದಾಖಲೆಯ 7,955 ಕೊರೋನಾ ಕೇಸ್​​ ಪತ್ತೆ

ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 7,955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 3220 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,77,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 46 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳು ಇದ್ದು, 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದು, 42,525 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!