ಬೆಂಗಳೂರು : ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ವಿತರಣೆ ಪುನರಾರಂಭವಾಗಲಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಮೇ 22 ರಿಂದ 18-44 ವರ್ಷದೊಳಗಿನ ವಯೋಮಾನದವರಿಗೆ ಕೊರೊನಾ ಲಸಿಕೆ ಪುನರಾಂಭಿಸಲಿದ್ದು, ಮೊದಲಿಗೆ ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ ಮುಂದಿನ ದಿನಗಳಲ್ಲಿ ಆದ್ಯತೆ ಗುಂಪುಗಳಿಗೆ ಲಸಿಕೆ ನೀಡಲಾಗುವುದು ಎಂದರು.
ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು:
- ಅಂಗವೈಕಲ್ಯ ಹೊಂದಿರುವ ಅಂದರೆ ಮಾನಸಿಕ ಅಸ್ವಸ್ಥತೆ ಇರುವ ಫಲಾನುಭವಿಗಳು ಮತ್ತು ಆರೈಕೆದಾರರು.
- ಖೈದಿಗಳು
- ಚಿತಾಗಾರ/ ಸ್ಮಶಾನ/ ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು.
- ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು
- ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು
- ಸರ್ಕಾರಿ ಸಾರಿಗೆ ಸಿಬ್ಬಂದಿ
- ಆಟೋ ಮತ್ತು ಕ್ಯಾಬ್ ಚಾಲಕರು
- ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು
- ಅಂಚೆ ಇಲಾಖೆ ಸಿಬ್ಬಂದಿಗಳು
- ಬೀದಿ ಬದಿಯ ವ್ಯಾಪಾರ ಮಾಡುವವರು
- ಭದ್ರತೆ ಮತ್ತು ಕಚೇರಿಗಳ ಹೌಸ್ಕೀಪಿಂಗ್ ಸಿಬ್ಬಂದಿಗಳು
- ನ್ಯಾಯಾಂಗ ಅಧಿಕಾರಿಗಳು
- ವಯೋವೃದ್ಧರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು
- ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
- ಮಾಧ್ಯಮದವರು
- ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು
- ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು(ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡಂತೆ)
- ಔಷಧಿ ತಯಾರಿಸುವ ಕಂಪನಿಯ ಸಿಬ್ಬಂದಿಗಳು
- ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು
- ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು(ವೃದ್ಧಾಶ್ರಮ ವಾಸಿಗಳು, ನಿರ್ಗತಿಕರು)
- ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು
- ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕೆಲಸಗಾರರು